Breaking
22 Mar 2026, Sun

ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ ನಾಲ್ಕು ಕಾರುಗಳಿಗೆ ಡಿಕ್ಕಿ

ಮಂಗಳೂರು: ಅಡ್ಯಾರ್ ಕಟ್ಟೆ ಬಳಿ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ನಾಲ್ಕೂ ಕಾರುಗಳು ಜಖಂಗೊಂಡಿದ್ದು, ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *