Breaking
24 Jun 2026, Wed

10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜ. 20 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಾಸನ ಚನ್ನರಾಯಪಟ್ಟಣ ನಿವಾಸಿ, ಎಸ್‌.ಎನ್‌.ಚಂದ್ರೆಗೌಡ ಎಂದು ಗುರುತಿಸಲಾಗಿದೆ.

ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ತಲೆಮರೆಸಿಕೊಂಡಿದ್ದ ಈತನ ವಿರುದ್ಧ 2009ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿಯಲ್ಲಿ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Leave a Reply

Your email address will not be published. Required fields are marked *