ಆಂಧ್ರಪ್ರದೇಶ: ನಂದ್ಯಾಲ್ ಜಿಲ್ಲೆಯಲ್ಲಿ ಟಯರ್ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡ ಬಸ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಮೂವರು ಸಜೀವ ದಹನವಾದ ಘಟನೆ ಇಂದು(ಜ. 22) ನಡೆದಿದೆ.

ಖಾಸಗಿ ಬಸ್ ಆಂಧ್ರದ ನೆಲ್ಲೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಬಲಭಾಗದ ಟೈಯರ್ ಸ್ಫೋಟಗೊಂಡಿದೆ. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ, ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್‌ಗಳನ್ನ ಸಾಗಿಸುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ ಚಾಲಕ, ಕಂಟೈನರ್ ಚಾಲಕ ಹಾಗೂ ಲಾರಿ ಕ್ಲೀನರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿ ಬೆಂಕಿ ನಂದಿಸಿದ್ದಾರೆ.




