Breaking
24 Jun 2026, Wed

ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್: ಕಾರು ಬೆಂಕಿಗಾಹುತಿ

ಬಂಟ್ವಾಳ : ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ-ಎಡಪದವು ರಾಜ್ಯ ಹೆದ್ದಾರಿಯ ಮುತ್ತೂರು ಸಮೀಪದ ನೂದೊಟ್ಟು ಎಂಬಲ್ಲಿ ಜ.21 ರಂದು ನಡೆದಿದೆ.

ಬಂಟ್ವಾಳದಿಂದ ಎಡಪದವು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ. ಕಾರು ಮೂಲರಪಟ್ನ ಸೇತುವೆಯ ಸಮೀಪ ತಲುಪಿದಾಗ ಹೆಡ್‌ಲೈಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ವಾಹನಕ್ಕೆ ವ್ಯಾಪಿಸಿದೆ. ಕಾರು ಸಂರ್ಪೂಣ ಸುಟ್ಟು ಭಸ್ಮವಾಗಿದೆ.

ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *