Breaking
22 Mar 2026, Sun

ಮುಗುಳಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೂತನ ಸಭಾಭವನ, ಅನ್ನಛತ್ರ ನಿರ್ಮಾಣ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮುಗುಳಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವವು 2027ರಲ್ಲಿ ಜರುಗಲಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಉತ್ತರ ಭಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ನೂತನ ಸಭಾಭವನ ಹಾಗೂ ಅನ್ನಛತ್ರ ಪಾಕಶಾಲೆಯನ್ನು ಅಂದಾಜು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುವ ಯೋಜನೆ ರೂಪಿಸಲಾಯಿತು.

ಈ ಕುರಿತು ವಾಸ್ತುಶಾಸ್ತ್ರ ಪ್ರಕಾರ ಸ್ಥಳ ಪರಿಶೀಲನೆ ನಡೆಸಿ ಕಟ್ಟಡದ ನೀಲನಕ್ಷೆ ಸಿದ್ಧಪಡಿಸುವ ಸಲುವಾಗಿ ವಾಸ್ತುಶಾಸ್ತ್ರಜ್ಞ ಮುನಿಯಂಗಳ ಪ್ರಸಾದ್ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡಿದರು.

ಈ ಸಂದರ್ಭ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರೀತಾಯ, ಗುತ್ತಿಗೆದಾರ ಮಹಾಬಲ ಕೊಟ್ಟಾರಿ, ಅರ್ಚಕ ಎಂ. ಕೃಷ್ಣ ಭಟ್, ಸಮಿತಿ ಸದಸ್ಯರಾದ ಹರಿಪ್ರಸಾದ್ ಭಂಡಾರಿ, ಎನ್.ಕೆ. ಶಿವರಾಜು ಪೂಜಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *