Breaking
24 Jun 2026, Wed

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಸದಸ್ಯನ ಬಂಧನ

ಮಂಗಳೂರು: ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಸದಸ್ಯನನ್ನು ಮಂಗಳೂರು ನಗರದ ಉರ್ವಾ ಪೊಲೀಸರು ಮದನಪಲ್ಲಿಯಲ್ಲಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಂಧಿತ ಆರೋಪಿಯನ್ನು ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ವೆಂಕಟಪ್ಪ ಎಂಬುವರ ಪುತ್ರ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ ಕೃಷ್ಣಪ್ಪ ಅಲಿಯಾಸ್ ಕೃಷ್ಣ (55) ಎಂದು ಗುರುತಿಸಲಾಗಿದೆ.

ಅ.11, 1997 ರ ಮಧ್ಯರಾತ್ರಿ, ಕುಖ್ಯಾತ ದಂಡುಪಾಳ್ಯ ಗ್ಯಾಂಗ್‌ನ ಸದಸ್ಯರು ಮಂಗಳೂರು ತಾಲೂಕಿನ ಉರ್ವಾ ಮಾರಿಗುಡಿ ಕ್ರಾಸ್ ಸಮೀಪದ ಅನ್ವರ್ ಮಹಲ್ ಎಂಬ ಮನೆಗೆ ದಂಡುಪಾಳ್ಯ ಗ್ಯಾಂಗ್‌ನ ಸದಸ್ಯರು ಬಲವಂತವಾಗಿ ಪ್ರವೇಶಿಸಿ ಮನೆಯಲ್ಲಿದ್ದ ಲೂಯಿಸ್ ಡಿಮೆಲ್ಲೊ (80) ಮತ್ತು ಮನೆಯಲ್ಲಿದ್ದ ರಂಜಿತ್ (80) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಕೊಲೆ ಮಾಡಿದ ನಂತರ, ಆರೋಪಿಗಳು ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದರು.

ಈ ಪ್ರಕರಣ ಸೇರಿದಂತೆ ಆರೋಪಿಯ ವಿರುದ್ದ ಕರ್ನಾಟಕದಾದ್ಯಂತ ಸುಮಾರು 13 ಕೊಲೆ ಮತ್ತು ದರೋಡೆ ಪ್ರಕರಣ ದಾಖಲಾಗಿತ್ತು.

ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *