Breaking
9 Aug 2026, Sun

ಭತ್ತದ ಗದ್ದೆಯಲ್ಲಿ ಬೆಂಕಿ ಅವಘಡ: ಮನೆಗಳಿಗೆ ಹಾನಿ

ಉಡುಪಿ: ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಸೇತುವೆಯ ಬಳಿಯ ದಂಡತೀರ್ಥ ವಾರ್ಡ್ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಜ. 22 ರಂದು ನಡೆದಿದೆ.

ಭತ್ತದ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಜ್ವಾಲೆಗಳು ತೀವ್ರವಾಗಿ ಹಬ್ಬಿ ಹತ್ತಿರದ ಮೂರರಿಂದ ನಾಲ್ಕು ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *