Breaking
22 Mar 2026, Sun

ಫೆ. 6: ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದಲ್ಲಿ ವರ್ಷಾವಧಿ ಮಹೋತ್ಸವ ಮತ್ತು ಉಚಿತ ಬೃಹತ್ ಆರೋಗ್ಯ ಶಿಬಿರ

ಬಂಟ್ವಾಳ: ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದಲ್ಲಿ ವರ್ಷಾವಧಿ ಮಹೋತ್ಸವ ಮತ್ತು ಉಚಿತ ಬೃಹತ್ ಆರೋಗ್ಯ ಶಿಬಿರವು ಫೆ. 6 ರಂದು ನಡೆಯಲಿದೆ.

ಪರಮ ಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇ. ಮೂ. ನಡಿಬೈಲು ಶಂಕರ ನಾರಾಯಣ ಭಟ್ ಇವರ ನೇತೃತ್ವದಲ್ಲಿ ಜರುಗಲಿದೆ ಹಾಗೂ ಭಾರತೀಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌(ರಿ) ಕನ್ಯಾನ ಇದರ ನೇತೃತ್ವದಲ್ಲಿ ಶ್ರೀಚಾಮುಂಡೇಶ್ವರಿ ಸೇವಾ ಟ್ರಸ್ಟ್ ಶ್ರೀ ಕ್ಷೇತ್ರ ಕಣಿಯೂರು ಕನ್ಯಾನ ಯೇನಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ಮೇಳವು ಶ್ರೀ ಕ್ಷೇತ್ರ ಕಣಿಯೂರು ಶಾಲಾ ಬಳಿ ನಡೆಯಲಿದೆ.

ಬೆಳಿಗ್ಗೆ ಗಣಪತಿ ಹವನ, ನವಕ ಕಲಶ ಅಭಿಷೇಕ, ನಾಗತಂಬಿಲ ನಡೆಯಲಿದ್ದು, 9.00 ಗಂಟೆಗೆ ಆರೋಗ್ಯ ಶಿಬಿರದ ಉದ್ಘಾಟನೆ, 10.30 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಶ್ರೀ ಕ್ಷೇತ್ರ ಕಣಿಯೂರುವಿನ ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಲಿದ್ದು ಕರ್ನಾಟಕ ರಾಜ್ಯ ಘನ ಸರಕಾರ ವಿಧಾನ ಸಭಾಧ್ಯಕ್ಷರು ಯು. ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಈ ವೇಳೆ ದ.ಕ. ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಮತ್ತು ಉಸ್ತುವಾರಿ ಸಚಿವರು ಗುಂಡುರಾವ್ ದಿನೇಶ್ ವಿಜ್ಞಾಪನ ಪತ್ರ ಬಿಡುಗಡೆಗೊಳ್ಳಲಿಸಲಿದ್ದಾರೆ.

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಸನ್ಮಾನ್ಯ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ, ಕರ್ನಾಟಕ ಸರಕಾರದ ಮಾಜಿ ಸಚಿವರು ಬಿ. ರಮಾನಾಥ ರೈ , ಕನ್ಯಾನದ ಗ್ರಾಮ ಪಂಚಾಯತ್ ಅಧ್ಯಕ್ಷರು ರೇಖಾ, ಕನ್ಯಾನದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಕುದ್ರಿಯ ಕ್ಷೇತ್ರದ ಹಿರಿಯ ಕಾರ್ಯಕರ್ತರು ಬಾಬು ಪೂಜಾರಿ ಹಾಗೂ ನಾಟಕ ರಚನೆಗಾರರು ಶಶಿಧರ್ ಕೆ. ಬಂಡಿತ್ತಡ್ಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ಅನ್ನಸಂತರ್ಪಣೆ, ಸಂಜೆ 6 ಗಂಟೆಗೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ, ರಾತ್ರಿ 8 ರಿಂದ ಶ್ರೀ ದೇವಿಗೆ ರಂಗಪೂಜೆ, ಪ್ರಸಾದ ಭೋಜನ ರಾತ್ರಿ 9 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ತುಳು ನಾಟಕೋತ್ಸವ ಪ್ರಶಸ್ತಿ ಪುರಸ್ಕೃತ “ಉಡಲ್ ಕಲಾವಿದೆರ್” ಕನ್ಯಾನ ಅಭಿನಯಿಸುವ “ಮದಿಮೆದ ಇಲ್ಲಡ್” ತುಳು ಸಾಂಸಾರಿಕ ನಾಟಕ ನಡೆಯಲಿದೆ.

Leave a Reply

Your email address will not be published. Required fields are marked *