Breaking
10 May 2026, Sun

ಕಾರೊಂದು ಸ್ಕೂಟರ್ ಗೆ ಡಿಕ್ಕಿ: ಸ್ಕೂಟರ್ ಸವಾರ ಸಾವು

ಬಂಟ್ವಾಳ : ಕಾರೊಂದು ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜ.23 ರಂದು ಮಡಂತ್ಯಾರಿನಲ್ಲಿ ನಡೆದಿದೆ.

ಮೃತರನ್ನು ಕಾವಳಮೂಡೂರು ಕಾರಿಂಜ ಪಾಡಿ ನಿವಾಸಿ ಪದ್ಮನಾಭ ದೇವಾಡಿಗ ( 45) ಎಂದು ಗುರುತಿಸಲಾಗಿದೆ.

ಹೋಟೆಲ್ ನಲ್ಲಿ ಸಪ್ಲಾಯರ್ ಕೆಲಸ ಮಾಡುತ್ತಿದ್ದ ಇವರು ಜ.23 ರಂದು ರಾತ್ರಿ ಹೋಟೆಲ್ ನಲ್ಲಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಮಂಗಳೂರು ಏರ್ ಪೋರ್ಟ್ ಕಡೆಯಿಂದ ಬರುತ್ತಿದ್ದ ಇಗ್ನಿಸ್ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಪುಂಜಾಲಕಟ್ಟೆ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *