Breaking
23 Mar 2026, Mon

ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ: ಸ್ಕೂಟರ್ ಸವಾರ ಸಾವು

ಉಡುಪಿ: ಕಲ್ಸಂಕ ಜಂಕ್ಷನ್ ಸಮೀಪ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಮಣಿಪಾಲದ ಅವಿನಾಶ್ (29) ಎಂದು ಗುರುತಿಸಲಾಗಿದೆ.

ಕಂಟೈನರ್ ಲಾರಿಯು ಉಡುಪಿಯಿಂದ ಮಣಿಪಾಲ ಕಡೆ ತೆರಳುತ್ತಿದ್ದ ವೇಳೆ ಸ್ಕೂಟರ್‌ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ ಸವಾರ ರಸ್ತೆಗೆ ಎಸೆಯಲ್ಪಟ್ಟು ಲಾರಿಯ ಚಕ್ರವು ಸವಾರನ ತಲೆಯ ಮೇಲೆ ಹರಿದಿದೆ. ಇದರಿಂದ ಗಂಭೀರ ಗಾಯಗೊಂಡ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *