Breaking
23 Mar 2026, Mon

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ‌ ಶಿಬಿರ

ಯುವವಾಹಿನಿ ಬಂಟ್ವಾಳ ಘಟಕದ ಮಾದರಿ ಕಾರ್ಯ ಶ್ಲಾಘನೀಯ : ಅಶೋಕ್ ಕುಮಾರ್ ಪಡ್ಪು

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ‌ ಶಿಬಿರವನ್ನು ಬಂಟ್ವಾಳ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ 2026ನೇ ಜ. 28ರಂದು ನಡೆಯಿತು.

ಈ ಶಿಬಿರವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನಾ ಸಮಿತಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಾಜ ಸೇವಾ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿದರು, ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ತಿಳಿಸಿದರು.

ಯುವವಾಹಿನಿ ಬಂಟ್ವಾಳ ಘಟಕದ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ನಡೆದ ಶಿಬಿರದಲ್ಲಿ ಒಟ್ಟು 529 ಶಿಬಿರಾರ್ಥಿಗಳು ಆಧಾರ್ ತಿದ್ದುಪಡಿ ನೊಂದಣಿ ಹಾಗೂ ಅಂಚೆ ಇಲಾಖೆಯ ವಿಮಾ ಸೌಲಭ್ಯಗಳ ಪ್ರಯೋಜನ ಪಡೆದರು.

Leave a Reply

Your email address will not be published. Required fields are marked *