Breaking
20 Sep 2026, Sun

ಆಕಸ್ಮಿಕವಾಗಿ ಮಗುಚಿ ಬಿದ್ದ ಪ್ರವಾಸಿಗರ ದೋಣಿ: ಪ್ರವಾಸಿಗರಿಗೆ ಗಾಯ

ಉಡುಪಿ: ಪ್ರವಾಸಿಗರ ದೋಣಿಯೊಂದು ಆಕಸ್ಮಿಕವಾಗಿ ಸಮುದ್ರಕ್ಕೆ ಮಗುಚಿ ಬಿದ್ದು ಹಲವು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಡಿಬೆಂಗ್ರೆ ಬೀಚ್ ಸಮೀಪ ಇಂದು(ಜ.26) ನಡೆದಿದೆ.

ಹತ್ತಿರದ ರೆಸಾರ್ಟ್‌ನಲ್ಲಿ ತಂಗಿದ್ದ ಪ್ರವಾಸಿಗರನ್ನು ಪ್ರವಾಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ವೇಳೆ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದು, ದೋಣಿಯಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮುದ್ರಕ್ಕೆ ಬಿದ್ದಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣವೇ ಘಟನಾ ಸ್ಥಳಕ್ಕೆ ಮೀನುಗಾರರು ಮತ್ತು ರಕ್ಷಣಾ ಸಿಬ್ಬಂದಿ ಧಾವಿಸಿ ಸಮುದ್ರಕ್ಕೆ ಬಿದ್ದವರನ್ನು ರಕ್ಷಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಪ್ರವಾಸಿಗರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *