ಬೆಳ್ತಂಗಡಿ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸಿಲುಕಿರುವ ಘಟನೆ ನಡ ಕನ್ಯಾಡಿ ಪರಿಸರದಲ್ಲಿ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಚಿರತೆಯ ಓಡಾಟ ತೀವ್ರವಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದಲ್ಲದೆ, ಹಲವು ಸಾಕು ಪ್ರಾಣಿಗಳ ಮೇಲೂ ದಾಳಿ ನಡೆಸಿತ್ತು. ಇದರಿಂದ ಸ್ಥಳೀಯರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿತ್ತು.

ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ, ಚಿರತೆ ಸಂಚರಿಸುತ್ತಿದ್ದ ಸ್ಥಳಗಳನ್ನು ಗುರುತಿಸಿ, ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿಶೇಷ ಬೋನುಗಳನ್ನು ಇಟ್ಟಿತ್ತು.
ಸದ್ಯ ಇದೀಗ ಚಿರತೆ ಬೋನಿಗೆ ಸಿಲುಕಿದ್ದು ಅದನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





