ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಿಂಪಡೆದಿರುವ ಹಾಗೂ ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ “ವಿಕಸಿತ್ ಭಾರತ್ ಗ್ಯಾರಂಟಿ ಯೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ರಾಜ್ಯ ಸರಕಾರದ ಸುತ್ತೋಲೆಯಂತೆ ವಿಶೇಷ ಗ್ರಾಮ ಸಭೆಯು ಸಂಗಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ (“ವಿಕಸಿತ್ ಭಾರತ್ “ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್)ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು ಇದರಲ್ಲಿನ ಕೆಲವೊಂದು ನಿಯಮಗಳು ಹಣ ದುರುಪಯೋಗಕ್ಕೆ ಕಡಿವಾಣ ಹಾಕಲಾಗಿದ್ದು ಭವಿಷ್ಯದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಸಂಗಬೆಟ್ಟು ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಅಭಿನಂದನೆ ಸಲ್ಲಿಸಲಾಯಿತು ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರಿಗೆ ಮತ್ತು ಕಾರ್ಮಿಕರಿಗೆ ಸದ್ರಿ ಸುತ್ತೋಲೆಗಳಲ್ಲಿ ಇರುವ ಅಂಶಗಳ ಬಗ್ಗೆ ಬಗ್ಗೆ ಸವಿವರವಾಗಿ ಓದಿ ತಿಳಿಸಲಾಯಿತು. ಹಾಗೂ ಹೊಸದಾಗಿ ಮರುನಾಮಮಕರಣವಾದ “ವಿಕಸಿತ್ ಭಾರತ್ ಗ್ಯಾರಂಟಿ ಯೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯ ಬಗ್ಗೆ ಸಹ ಮಾಹಿತಿಯನ್ನು ನೀಡಲಾಯಿತು. ಈ ಬಗ್ಗೆ ಎರಡು ಯೋಜನೆಗಳಲ್ಲಿ ಇರುವ ನಿಯಮಗಳು ಮತ್ತು ಸುಧಾರಣೆ ಗಳನ್ನು ಕುಳಂಕೂಸ ವಾಗಿ ಪರಿಶೀಲನೆ ಮಾಡಿ ಸಭೆಯಲ್ಲಿ ಚರ್ಚಿಸಲಾಯಿತು.

ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತಂದಿರುವ “ವಿಕಸಿತ್ ಭಾರತ್” ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್ )ಯೋಜನೆ ಅನುಷ್ಠಾನ ಗೊಳಿಸುವರೇ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸತೀಶ್ ಪೂಜಾರಿ, ಸದಸ್ಯರಾದ ಸಂದೇಶ ಶೆಟ್ಟಿ, ದಾಮೋದರ ಪೂಜಾರಿ, ದೇವಪ್ಪ ಕರ್ಕೇರ, ಬೇನಾಡಿಕ್ಟ ಡಿ ‘ಕೊಸ್ತ, ಶಾಂತ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾ ನಾಯ್ಕ್, ಕಾರ್ಯದರ್ಶಿ ರೋಹಿಣಿ ಶೆಟ್ಟಿ ಉಪಸ್ಥಿತರಿದ್ದರು. ಸಾರ್ವಜನಿಕರ ಪರವಾಗಿ ಮಾಜಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಪ್ರಭಾಕರ ಪ್ರಭು, ರತ್ನಾಕುಮಾರ್ ಚೌಟ ಸಭೆಯಲ್ಲಿ ಭಾಗವಹಿಸಿದ್ದರು.


