Breaking
20 Sep 2026, Sun

ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು: ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮೂಡಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಹಸುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಜ. 26 ರಂದು ನಡೆದಿದೆ.

ಬಡಗಮಿಜಾರು ನಿವಾಸಿ ಜಯರಾಮ್ ಗೌಡ ಅವರಿಗೆ ಸೇರಿದ ಹಸುವೊಂದು ಸುಮಾರು 60 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಗಮನಿಸಿದ ಮನೆಯವರು ತಕ್ಷಣವೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಗ್ಗದ ಸಹಾಯದಿಂದ ಹಸುವಿಗೆ ಯಾವುದೇ ಗಾಯವಾಗದಂತೆ ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ.

Leave a Reply

Your email address will not be published. Required fields are marked *