Breaking
20 Sep 2026, Sun

ಮನೆಗೆ ನುಗ್ಗಿದ ಕಳ್ಳರು: ಬೆಲೆಬಾಳುವ ವಸ್ತುಗಳು ಕಳವು

ಉಳ್ಳಾಲ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಗೆ ನುಗ್ಗಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮದ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದೆ.

ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿಯಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ , ಪುತ್ರ ಹಾಗೂ ಪುತ್ರಿ ಅವರು ಮನೆಗೆ ಬೀಗ ಹಾಕಿ ಕುಟುಂಬ ಸಹಿತ ಸೌದಿಗೆ ತೆರಳಿದ್ದರು.

ಈ ಹಿನ್ನಲೆಯಲ್ಲಿ ಮನೆ ನೋಡಿಕೊಳ್ಳಲು ಅಬೂಬಕ್ಕರ್ ಅವರ ಸಹೋದರನ ಪತ್ನಿ ಮೈನಾಝ್ ಮನೆಗೆ ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಕಳ್ಳರು ಮನೆಯ ಮುಂಭಾಗದ ಬಾಗಿಲನ್ನು ಒಡೆದು ಒಳನುಗ್ಗಿ ನಾಲ್ಕು ಕಪಾಟುಗಳನ್ನು ಒಡೆದು ಜಾಲಾಡಿದ್ದಾರೆ. ಆದರೆ ಕಳ್ಳರಿಗೆ ಚಿನ್ನಾಭರಣಗಳು ಸಿಗದ ಕಾರಣ ಕಪಾಟಿನಲ್ಲಿದ್ದ ಬೆಲೆ ಬಾಳುವ ವಾಚ್, ಮೊಬೈಲ್ ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *