Breaking
22 Mar 2026, Sun

ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಸಜೀಪ ಮೂಡದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಕಾಲೇಜು ಪ್ರಾಚಾರ್ಯ ಡಾಕ್ಟರ್ ಜೈ ರಾಬಿ ನೆರವೇರಿಸಿದರು.

ಈ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಂ.ಸುಬ್ರಹ್ಮಣ್ಯ ಭಟ್ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯ ವಿಶ್ವನಾಥ ಕೊಟ್ಟಾರಿ ಉಪನ್ಯಾಸಕರಾದ ಸುರೇಶ್ ಬಿ ,ಬಾಲಕೃಷ್ಣ ಎನ್ , ವಿ.ಭಾರತಿ , ಗಾಯತ್ರಿ , ಶೋಭ , ಸುಂದರಿ , ಬಾಲಕೃಷ್ಣ ನಾಯಕ್, ಮುಂತಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ಧ್ವಜ ಗೀತೆ ಹಾಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.

Leave a Reply

Your email address will not be published. Required fields are marked *