ಮುಂಬೈ: ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ 5 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಇಂದು(ಜ. 28) ನಡೆದಿದೆ.
ಮುಂಬೈನಿಂದ ಬಾರಾಮತಿಗೆ ಐದು ಮಂದಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಣ್ಣ ವಿಮಾನವು ಬಾರಾಮತಿಯಲ್ಲಿ ಲ್ಯಾಂಡಿಂಗ್‌ಗೆ ಸಿದ್ಧವಾಗಿದ್ದ ವೇಳೆ ಅಪಘಾತಕ್ಕೀಡಾಗಿದೆ.

ವಿಮಾನದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ , 2 ಸಿಬ್ಬಂದಿ 1 ಪಿಎಸ್ಒ ಮತ್ತು 1 ಅಟೆಂಡೆಂಟ್ ಮತ್ತು ಪಿಐಸಿ, ಎಫ್‌ಒ ಸೇರಿ ಒಟ್ಟು ಐದು ಮಂದಿ ಸದಸ್ಯರೊಂದಿಗೆ ಇದ್ದರು ಎನ್ನಲಾಗಿದೆ.
ಮಾಹಿತಿಯ ಪ್ರಕಾರ ಇದು 45XR ಮಾದರಿಯ ಸಣ್ಣ ಏರ್‌ಕ್ರಾಫ್ಟ್ ಆಗಿದ್ದು, ಬೆಳಗ್ಗೆ 8.10ಕ್ಕೆ ಮುಂಬೈನಿಂದ ಹೊರಟಿತ್ತು. ಬಾರಾಮತಿ ವಿಮಾನ ನಿಲ್ದಾಣದ ಸಮೀಪವಿರುವ ಹೊಲದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.

ವರದಿಗಳ ಪ್ರಕಾರ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಿನ್ನೆಲೆ ಅಜಿತ್ ಪವಾರ್ ಬಾರಾಮತಿಯಲ್ಲಿ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ತೆರಳುತ್ತಿದ್ದರು ಎನ್ನಲಾಗಿದೆ.




