Breaking
4 Feb 2026, Wed

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಮೂಲ್ಕಿ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಪ್ರಾಣಾಪಾಯದಿಂದ ಪಾರಾದ ಘಟನೆ ಹಳೆಯಂಗಡಿ ಬಳಿ ಜ.27 ರಂದು ನಡೆದಿದೆ.

ಹೆದ್ದಾರಿಯಿಂದ ಪಕ್ಷಿಕೆರೆಗೆ ಹೋಗುವ ತಿರುವಿನಲ್ಲಿ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಲಾರಿಯ ಚಕ್ರದಡಿ ಸಿಲುಕಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಸವಾರನಿಗೆ ಸಣ್ಣಪುಟ್ಟ ಗಾಯಗಳಿದ್ದು ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *