Breaking
4 Feb 2026, Wed

ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

ಪುತ್ತೂರು: 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ. 24 ರಂದು ನಡೆಯಿತು.

ಕಂಬಳದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದವರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಜಾಗತಿಕವಾಗಿ ಜೇನು ಗಡ್ಡದಾರಿ ಜೇನುಕೃಷಿ, ಜೇನುಕೃಷಿ ಕುರಿತು ಸಂಶೋಧನಾ ಬರಹಗಳು, ಬೋರ್ಡ್ ದ್ರಾವಣ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿರುವ, ಪರಿಸರ ಸಂರಕ್ಷಣೆಗೆ ಸಿಮೆಂಟ್ ಶೀಟಿನಲ್ಲಿ ಜೇನುಪೆಟ್ಟಿಗೆಗಳ ವಿನೂತನ ಪ್ರಯೋಗ ನಡೆಸಿದವರು, ಪ್ರಕೃತಿ ವೈಚಿತ್ರ್ಯ ಹಾಗೂ ಗಿಡಮೂಲಿಕೆ ಔಷಧಿ ಕುರಿತು ಸುಂದರ ಲೇಖನಗಳನ್ನು ನಾಡಿನಾದ್ಯಂತ ಪತ್ರಿಕೆಗಳಲ್ಲಿ ಪ್ರಕಟಿಸಿರುವ ಗ್ರಾಮೀಣ ಹವ್ಯಾಸಿ ವರದಿಗಾರರು ಹಾಗೂ ಸ್ವರ ಸಿಂಚನ ಕಲಾತಂಡದ ಮೂಲಕ ಸಂಗೀತ ಪ್ರಸಾರಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಕೃಷಿ–ಸಾಹಿತ್ಯ ಕ್ಷೇತ್ರದ ಸಾಧಕ ಕುಮಾರ್ ಪೆರ್ನಾಜೆ ಅವರನ್ನು ಸಮಾರಂಭದ ಅಧ್ಯಕ್ಷರಾಗಿದ್ದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಕುಮಾರ್ ಪೆರ್ನಾಜೆಯವರಿಗೆ ಶಾಲು–ಪೇಟ ಹೊದಿಸಿ ಸನ್ಮಾನ ಪತ್ರ ನೀಡಿ ಗೌರವಿಸಿದರು.

ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ಹಣ್ಣು ಹಂಪಲುಗಳನ್ನಿತ್ತು ಗೌರವಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿವಿ ಸನ್ಮಾನ ಪತ್ರವಾಚಿಸಿದರು.

ವೇದಿಕೆಯಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷೇ ಮಾಜಿ ಶಾಸಕಿ ಶಕುಂತಲಾ ಟಿ .ಶೆಟ್ಟಿ, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಕೋಶಾಧಿಕಾರಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಪಂಜಿಗುಡ್ಡೆ ಈಶ್ವರ ಭಟ್, ಕಂಬಳದ ತೀರ್ಪುಗಾರ ಗುಣಪಾಲ ಕಡಂಬ , ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ,ದ. ಕ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮದ್ ಬಡಗನ್ನೂರು ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮೌರಿಸ್ ಮಸ್ಕರೆನಸ್ ,ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಸರಿತ , ನ್ಯಾಯಾಧೀಶೆ ಪ್ರಕೃತಿ ,ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳ, ಚಲನಚಿತ್ರ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮುಂತಾದ ಗಣ್ಯ ಅತಿಥಿಗಳು ಖ್ಯಾತ ಚಲನಚಿತ್ರ ನಟ ನಟಿಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸಂಚಾಲಕ ವಸಂತಕುಮಾರ್ ರೈ ದುಗ್ಗಳ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ನಿರೂಪಿಸಿದರು.

Leave a Reply

Your email address will not be published. Required fields are marked *