ಶಿವಮೊಗ್ಗ : ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಖಾಸಗಿ ಸ್ಲೀಪರ್ ಬಸ್ಸೊಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ.

ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್ ನಲ್ಲಿದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಂದು ತಿಳಿದುಬಂದಿದೆ.





