Breaking
20 Sep 2026, Sun

ಕೇರಳದಲ್ಲಿ ಕಂದಕಕ್ಕೆ ಕಾರು ಉರುಳಿ ಬಿದ್ದು ಮಂಗಳೂರು ಮೂಲದ ಯುವಕ ಸಾವು

ಕೇರಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಮಂಗಳೂರು ಮೂಲದ ಯುವಕ ಸಾವನ್ನಪ್ಪಿದ ಘಟನೆ ಕೇರಳದ ಕೊಟ್ಟಾಯಂ ಸಮೀಪದ ಕರುಕಾಚಲದಲ್ಲಿ ನಡೆದಿದೆ.

ಮುಲ್ಕಿ ತಾಲೂಕಿನ ಅಂಗರಗುಡ್ಡೆ ನಿವಾಸಿಯಾಗಿರುವ ಶಾನವಾಝ್ ಯಾನೆ ಶಮೀಮ್ (32) ಎಂಬಾತ ಮೃತ ದುರ್ದೈವಿಯಾಗಿದ್ದಾನೆ.

ಇವರ ಜೊತೆ ಕಾರಿನಲ್ಲಿದ್ದ ಕಾಟಿಪಳ್ಳದ ಸಿರಾಜ್, ಕಾನ ನಿವಾಸಿ ಅಶ್ನಾಕ್, ಸೂರಿಂಜೆ ನಿವಾಸಿ ಶಬೀರ್ ಹಾಗೂ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಸಿರಾಜ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *