Breaking
3 Feb 2026, Tue

ಸಂಪಾಜೆ ಗೇಟಿನ ಬಳಿ ಅಪಘಾತ: ರಿಕ್ಷಾ ಚಾಲಕ ಸಾವು

ಸುಳ್ಯ: ಕೊಡಗು ಸಂಪಾಜೆ ಗೇಟಿನ ಬಳಿ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಎದುರಿನಿಂದ ಬರುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟವರನ್ನು ಬಿಸೆಲುಮನೆ ರಾಮಣ್ಣ ಗೌಡ ಅವರ ಪುತ್ರ ಸುಂದರ್ ಚಿಟ್ಟಿಕ್ಕಾನ (56) ಎಂದು ಗುರುತಿಸಲಾಗಿದೆ.

ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದ ರಿಕ್ಷಾಕ್ಕೆ ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು ಈ ವೇಳೆ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ಚಕ್ರಗಳ ಕೆಳಗೆ ಸಿಲುಕಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *