Breaking
29 Jun 2026, Mon

ತೀರ್ಥಹಳ್ಳಿ: ಮಂಗನ ಕಾಯಿಲೆಯಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಕಟಗಾರು ಗ್ರಾಮದ ಕಿಶೋರ್(25 ವ) ಎಂದು ಗುರುತಿಸಲಾಗಿದೆ.

ಜ. 20 ರಂದು ಜ್ವರದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸೋಂಕಿನ ತೀವ್ರತೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *