Breaking
19 Sep 2026, Sat

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಬೆಳ್ತಂಗಡಿ: ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ 43 ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

2025-26 ಸಾಲಿನ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ ಹಲವು ಪರೀಕ್ಷೆಗಳನ್ನು ಆಯೋಜಿಸಿದ್ದರು. ಈ ಪೈಕಿ ಇಂಟರ್ ನ್ಯಾಷನಲ್ ಕಾಮರ್ಸ್ ಒಲಿಂಪಿ ಯಾಡ್ ಪರೀಕ್ಷೆಯಲ್ಲಿ 7 ವಿದ್ಯಾರ್ಥಿಗಳು, ಇಂಗ್ಲೀಷ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ 25 ವಿದ್ಯಾರ್ಥಿಗಳು ಹಾಗೂ ನ್ಯಾಷನಲ್ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ್ದಾರೆ. ಇಬ್ಬರು ಎರಡನೇ ಹಂತದ ಇಂಗ್ಲಿಷ್ ಒಲಿಂಪಿಯಾಡ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಿನ್ಸಿಪಾಲ್ ಪ್ರಮೋದ್ ಕುಮಾರ್ ಬಿ., ವೈಸ್ ಪ್ರಿನ್ಸಿಪಾಲ್ ಡಾ. ರಾಜೇಶ್ ಬಿ. ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *