Breaking
21 Mar 2026, Sat

ಬಸ್ ನಿಲ್ದಾಣಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲಾ ಕಳ್ಳನ ಬಂಧನ

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ್‌ ಜಿಲ್ಲಾ ಕಳ್ಳನನ್ನು ಜ.29 ರಂದು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ಮಡಿಕೇರಿಯ ತ್ಯಾಗರಾಜ್ ಕಾಲೋನಿ ನಿವಾಸಿ ಮಹಮ್ಮದ್ ಇಮ್ರಾನ್ ಎನ್.ಎಮ್(44) ಎಂದು ಗುರುತಿಸಲಾಗಿದೆ.

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್ ಗಳನ್ನು ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈತನ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿಶೇಷ ತಂಡವನ್ನು ರಚಿಸಿ ಜ. 28 ರಂದು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ನ ಬಳಿಯಲ್ಲಿ ದಸ್ತಗಿರಿ ಮಾಡಿದ್ದಾರೆ.

ಆರೋಪಿಯಿಂದ ಒಟ್ಟು 6,47,920 ರೂ. ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆಗಳನ್ನು 5,000 ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯ ವಿರುದ್ಧ ಹಾಸನ, ಮೈಸೂರು ಸೇರಿದಂತೆ ಮನೆ ಕಳ್ಳತನ ಪ್ರಕರಣ ಕೂಡ ದಾಖಲಾಗಿದೆ.

Leave a Reply

Your email address will not be published. Required fields are marked *