Breaking
3 Feb 2026, Tue

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಸಂದೇಶ ಹಂಚಿಕೆ: ಇಬ್ಬರು ಪೊಲೀಸ್ ವಶಕ್ಕೆ

ಬ್ರಹ್ಮಾವರ: ದ್ವೇಷಪೂರಿತ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಉದ್ಯಮಿ ಕೋಟೇಶ್ವರದ ಕೆ. ನಾಗರಾಜ್(62) ಹಾಗೂ ಖಾಸಗಿ ಸಹಕಾರಿ ಬ್ಯಾಂಕ್ ಒಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಬ್ರಹ್ಮಾವರದ ವಾರಂಬಳ್ಳಿಯ ಸಂತೋಷ್ ಕುಮಾರ್ ಶೆಟ್ಟಿ(56)ಯನ್ನು ಎಂದು ಗುರುತಿಸಲಾಗಿದೆ.

ಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇವರ ವಿರುದ್ಧ ಜ.29 ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ಕೈ ಗೊಂಡ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *