Breaking
21 Mar 2026, Sat

ಫೆ. 3: ಕುದ್ಕೋಳಿಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ

ಬಂಟ್ವಾಳ: ಓಂ ಫ್ರೆಂಡ್ಸ್ ಕುದ್ಕೋಳಿ ಯುವಕ ಮಂಡಲ (ರಿ.) ಹಾಗೂ ಓಂ ಫ್ರೆಂಡ್ಸ್ ಮಹಿಳಾ ಸಮಿತಿ ಕುದ್ಕೋಳಿ ಇದರ 19ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಫೆ. 3 ರಂದು ಕುದ್ಕೋಳಿಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ಸಂಜೆ 6:00ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, ಅದೇ ದಿನ ಸಂಜೆ 6:00 ಗಂಟೆಗೆ ಸರಿಯಾಗಿ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ಸುಂಕದಕಟ್ಟೆ ಬಜಪೆ – ಇವರಿಂದ ವಿದ್ಯುದ್ದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ ಕಚ್ಚೂರು ಮಾಲ್ದಿ ಆಟ ತುಳು ಕಥಾ ಭಾಗದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಸಂಘದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *