Breaking
21 Sep 2026, Mon

ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ : ಕಾರು ಸುಟ್ಟು ಭಸ್ಮ

ಕುಂದಾಪುರ: ಹೆಮ್ಮಾಡಿ-ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜ.31 ರಂದು ನಡೆದಿದೆ.

ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಎಂಬುವರಿಗೆ ಸೇರಿದ ಕಾರು ಎಂದು ತಿಳಿದುಬಂದಿದೆ.

ಕೆಲಸದ ನಿಮಿತ್ತ ಆಲೂರಿಗೆ ತೆರಳಿ ಕುಂದಾಪುರದ ಕಡೆಗೆ ವಾಪಸ್ಸಾಗುತ್ತಿದ್ದಾಗ, ಕಾರಿನ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಭಾಸ್ಕರ್ ಆಚಾರ್ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕೊಲ್ಲೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *