Breaking
4 Feb 2026, Wed

ತುಂಬೆ ವಿಶ್ವಜ್ಯೋತಿ ಯುವಕ ಮಂಡಲ ನೂತನ ಕಟ್ಟಡಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1 ಲಕ್ಷ ಅನುದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ತುಂಬೆ ವಿಶ್ವಜ್ಯೋತಿ ಯುವಕ ಮಂಡಲ ಮತ್ತು ಮಾತೃ ಮಂಡಳಿ ಇದರ ನೂತನ ಕಟ್ಟಡ ರಚನೆಗೆ 1 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ ರವರು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಪೂವಪ್ಪ ಪೂಜಾರಿ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೇಂದ್ರ ಒಕ್ಕೂಟದ ನಿಕಟಪೂರ್ವ ಪೂರ್ವ ಅಧ್ಯಕ್ಷರಾದ ಮಾಧವ ವಲವೂರು,, ತುಂಬೆ ವಲಯದ ಮೇಲ್ವಿಚಾರಕಿ ಮಮತಾ,ಸೇವಾ ಪ್ರತಿನಿಧಿ ಅನಿತ, ಯುವಕ ಮಂಡಲ ಮತ್ತು ಮಾತೃ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *