Breaking
4 Feb 2026, Wed

ತೆಕ್ಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಡಿಕ್ಕಿ

ಕುಂದಾಪುರ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ತೆಕ್ಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕ್‌ ಎದುರುಗಡೆ ಫೆ.1 ರಂದು ನಡೆದಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಬಂದು ಕಾರಿಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ ಬ್ಯಾಗ್‌ ತೆರೆದಿದ್ದು ರಸ್ತೆಯ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.

ಅಪಘಾತದಲ್ಲಿ ಒಂದು ಕಾರಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಎರಡು ಟಯರ್‌ ಗಳು ಸಿಡಿದಿದೆ. ಮತ್ತೊಂದು ಕಾರಿನ ಚಾಲಕ ಕುಂದಾಪುರದ ನರಸಿಂಹ ಹೊಳ್ಳ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *