Breaking
3 Feb 2026, Tue

ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ

ಬೆಳ್ತಂಗಡಿ: ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರೊಂದು ಢಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಫೆ. 1 ರಂದು ನಡೆದಿದೆ.

ಗಾಯಗೊಂಡವರನ್ನು ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಎಂದು ಗುರುತಿಸಲಾಗಿದೆ.

ಕಾರು ಚಾಲಕ ಹರ್ಷನ್ ಮನೋಜ್ ಅವರು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ಇಬ್ಬರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಇಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಸೀನಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಮೇಶ್ ಅವರ ಎಡಕಾಲು, ತಲೆ, ಎಡಗೈಗೆ ಗಾಯವಾಗಿದ್ದು, ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಕುರಿತು ತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *