Breaking
6 May 2026, Wed

11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಉಡುಪಿ: 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಜ.31 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಆಶಾ ಸುಮಿತ್ರಾ ಕೃಷ್ಣ ಮತ್ತು ರೇಖಾ ದಾನಪ್ಪ ಎಂದು ಗುರುತಿಸಲಾಗಿದೆ.

ಮಲ್ಪೆ ಬೀಚ್‌ನಲ್ಲಿ ನಡೆದ ಕಳ್ಳತನದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ.

ಆರೋಪಿಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪ್ರದೇಶದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಪಡೆದ ಮಲ್ಪೆ ಪೊಲೀಸ್ ತಂಡವು ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿತು.

ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *