Breaking
21 Sep 2026, Mon

ಆಸ್ತಿ ವಿವಾದ : ತಂದೆಯಿಂದ ಮಗಳ ಕೊಲೆ

ಕಾಸರಗೋಡು: ತಂದೆಯೇ ಮಗಳನ್ನು ಕೊಲೆ ಮಾಡಿದ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ನಡೆದಿದೆ.

ಕೊಲೆಗೀಡಾದ ಯುವತಿಯನ್ನು ಜುಮೈಲಾ(18 ವ) ಎಂದು ಗುರುತಿಸಲಾಗಿದೆ.

ವಿದೇಶದಲ್ಲಿದ್ದ ತಂದೆ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಆಸ್ತಿಯ ವಿಚಾರಕ್ಕೆ ಸಂಬಂಧಿಸಿ ಕುಟುಂಬದಲ್ಲಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಫೆ. 2 ರಂದು ಜುಮೈಲಾ ಅವರ ಮನೆಯಲ್ಲಿ ಕಿರುಚಾಟದ ಶಬ್ದ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ ಯುವತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಸಾವನ್ನಪ್ಪಿದ್ದಾರೆ.

ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಮನೆಯಲ್ಲಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *