ಮಂಗಳೂರು: ಯಾರೂ ಇಲ್ಲದ ವೇಳೆ ಮನೆಯೊಳಗೆ ಕಳ್ಳರು ನುಗ್ಗಿ ಚಿನ್ನಾಭರಣಗಳು ಹಾಗೂ ನಗದು ದೋಚಿ ಪರಾರಿಯಾದ ಘಟನೆ ಮೂಲ್ಕಿ ತಾಲೂಕಿನ ಕಿನ್ನಿಗೋಳಿಯಲ್ಲಿ ನಡೆದಿದೆ.

ಕಿನ್ನಿಗೋಳಿಯಲ್ಲಿರುವ ಸಣ್ಣ ಉದ್ಯಮಿಯಾಗಿರುವ ಪವನ್ ಕುಮಾರ್ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು ಪವನ್ ಕುಮಾರ್ ಅವರ ತಾಯಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ.

ಮನೆಯ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ಒಡೆದು ಚಿನ್ನಾಭರಣಗಳು ಹಾಗೂ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಫರೆನ್ಸಿಕ್ ತಜ್ಞರು ಹಾಗೂ ಪೊಲೀಸ್ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





