Breaking
3 Feb 2026, Tue

ನಿಯಂತ್ರಣ ತಪ್ಪಿದ ಬೈಕ್: ಸವಾರ ಸಾವು

ಉಡುಪಿ: ಸವಾರನ ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿಯ ಬೆಳ್ಳಾಡಿಯಲ್ಲಿ ಫೆ. 01 ರಂದು ನಡೆದಿದೆ.

ಮೃತಪಟ್ಟವರನ್ನು ಕೋಟ ಮಣೂರಿನ ಪಡುಕರೆ ನಿವಾಸಿ ಪ್ರಭಾಕರ್ ಮೆಂಡನ್ ಎಂದು ಗುರುತಿಸಲಾಗಿದೆ.

ಪ್ರಭಾಕರ್ ಮೆಂಡನ್ ಅವರು ತಮ್ಮ ಮನೆಯಿಂದ ಪತ್ನಿಯ ಮನೆಗೆ ಹೋಗುತ್ತಿದ್ದ ವೇಳೆ ಬೆಳ್ಳಾಡಿ ಬಳಿ ಬೈಕ್ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಸ್ಥಳೀಯರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *