Breaking
20 Sep 2026, Sun

ಇನ್ನೋವಾ ಕಾರು ಸ್ಕೂಟರ್‌ಗೆ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಉಡುಪಿ : ಇನ್ನೋವಾ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯಡ್ಕ ಪಟ್ಟಣದಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರನು ರಸ್ತೆಗೆ ಬಿದ್ದಿದ್ದಾನೆ. ಗಾಯಗೊಂಡ ಸವಾರನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *