Breaking
3 Feb 2026, Tue

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ತಂಡವು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ

ಉಜಿರೆ : ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನ ತಂಡವು ಫೆ. 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ ನೀಡಿದರು.

ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು.

ನಿರಂತರವಾಗಿ ಸೇವಾಭಾರತಿ ಸಂಸ್ಥೆಗೆ CSR ಅನುದಾನವನ್ನು ಒದಗಿಸುತ್ತಿರುವುದಕ್ಕಾಗಿ ಸಂಸ್ಥೆಯ ಪರವಾಗಿ ಮನದಾಳದ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *