Breaking
22 Mar 2026, Sun

ಚಾರ್ಮಾಡಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ: ಹುಲ್ಲುಗಾವಲು ಪ್ರದೇಶಕ್ಕೆ ಭಾರೀ ಹಾನಿ

ಚಾರ್ಮಾಡಿ : ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ನಡುವಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ದ.ಕ ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ರಸ್ತೆ ಬದಿಯಲ್ಲಿ ಆರಂಭವಾದ ಬೆಂಕಿ ಕಾಡಿನತ್ತ ವ್ಯಾಪಿಸಿದೆ. ಪರಿಣಾಮ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಹೊತ್ತಿ ಉರಿದಿದೆ ಎಂದು ತಿಳಿದುಬಂದಿದೆ.

ಗಾಳಿಯ ವೇಗ ಹೆಚ್ಚಿದ್ದರಿಂದ ಬೆಂಕಿ ತೀವ್ರವಾಗಿ ಹರಡಿದ್ದು ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಧಾವಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published. Required fields are marked *