Breaking
22 Mar 2026, Sun

ವಂಚನೆ ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಫೆ. 3 ರಂದು ಬಂಧಿಸಿದ್ದಾರೆ.

ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಬಂಧಿತ ಆರೋಪಿಯಾಗಿದ್ದಾನೆ.

2019ರಲ್ಲಿ ವಂಚನೆ ಪ್ರಕರಣದಲ್ಲಿ ಸಂಬಂಧಿಸಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಪ್ರಕರಣದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ನಾಪತ್ತೆಯಾಗಿದ್ದ ಈತನಿಗೆ ವಾರೆಂಟ್‌ ಜಾರಿಯಾಗಿದ್ದು ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಇದೀಗ ಈ ಪ್ರಕರಣದ ತನಿಖೆ ಕೈಗೊಂಡ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯ ನಿವಾಸಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *