Breaking
22 Mar 2026, Sun

ಹೆಜಮಾಡಿ ಟೋಲ್ ಗೇಟ್ ನಲ್ಲಿ ಹುಚ್ಚಾಟ ಮೆರೆದಿದ್ದ ವಿದ್ಯಾರ್ಥಿಗಳ ಬಸ್‌ ಹಂಪಿಯಲ್ಲಿ ಪಲ್ಟಿ

ವಿಜಯನಗರ : ಕಾಪು ತಾಲೂಕಿನ ಹೆಜಮಾಡಿ ಟೋಲ್ ನಲ್ಲಿ ಹುಚ್ಚಾಟವನ್ನು ಮೆರೆದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಎಂಬಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಪ್ರವಾಸಕ್ಕೆಂದು ಬಸ್ ನಲ್ಲಿ ಬಂದ ವಿದ್ಯಾರ್ಥಿಗಳು ಹೆಜಮಾಡಿ ಟೋಲ್ ರಸ್ತೆಯಲ್ಲಿ ಬಸ್ ನಿಲ್ಲಿಸಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದರು . ನಂತರ ಹಂಪಿಗೆ ತೆರಳುತ್ತಿದ್ದ ವೇಳೆ ಕೂಡ್ಲಿಗಿ ತಾಲೂಕಿನ ಅಮ್ಮನ ಕೇರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಘಟನೆಯಲ್ಲಿ ಶಿಕ್ಷಕಿ ಸೇರಿದಂತೆ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *