Breaking
9 Feb 2026, Mon

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿರುವ ಆರೋಪ,ಇಬ್ಬರ ಬಂಧನ

ಮಣಿಪಾಲ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿದ್ದಾರೆ ಅನ್ನುವ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಣಿಪಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನಿತೇಶ್ (20) ಮತ್ತು ಹಿತೇಶ್ (19) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *