Breaking
20 Sep 2026, Sun

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಆರೋಪಿಗಳನ್ನು ಕುಂದಾಪುರದ ಮಾಚಟ್ಟು ಗ್ರಾಮದ ಶರತ್ ಶೆಟ್ಟಿ ಮತ್ತು ಪ್ರಶಾಂತ್ ನಾಯ್ಕ್ ಎಂದು ಗುರುತಿಸಲಾಗಿದೆ.

ಅಮಾಸೆಬೈಲು ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೋಗಿ ಬರುವಾಗ ಆಟೋ ರಿಕ್ಷಾ ಚಾಲಕ ಶರತ್ ಶೆಟ್ಟಿ ಮತ್ತು ಆತನ ಸಹಚರ ಪ್ರಶಾಂತ್ ನಾಯ್ಕ್ ಆಟೋರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು.

ಈ ಕುರಿತು ಬಾಲಕಿ ತನ್ನ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿದ್ದಳು. ಶಿಕ್ಷಕರು ನೀಡಿದ ದೂರಿನ ಮೇರೆಗೆ 2025ರ ಜುಲೈ 15ರಂದು ಅಮಾಸೆಬೈಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 5,000 ರೂಪಾಯಿ ದಂಡ ವಿಧಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *