Breaking
20 Sep 2026, Sun

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಲಾರಿ ಪಲ್ಟಿ

ಪುತ್ತೂರು: ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ಜ.6 ರಂದು ನಡೆದಿದೆ.

ಮಂಗಳೂರು ಕಡೆಯಿಂದ ಸರಕನ್ನು ಹೊತ್ತು ಮಡಿಕೇರಿ ಕಡೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಬಳಿಕ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ

ಅಪಘಾತದಲ್ಲಿ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ರಸ್ತೆಯಿಂದ ಲಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮಗೊಳಿಸಲಾಯಿತು.

Leave a Reply

Your email address will not be published. Required fields are marked *