Breaking
9 Feb 2026, Mon

ಬೆಳ್ತಂಗಡಿಯ ಕಿಲ್ಲೂರಿನಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಸಮೀಪದ ಕಿಲ್ಲೂರಿನಲ್ಲಿ ನಡೆದಿದೆ.

ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45ವ) ಅವರು ರಬ್ಬರ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

ಅವಿವಾಹಿತರಾದ ಇವರು ಮರದ ಕೆಲಸ ಮಾಡುತ್ತಿದ್ದರು. ಕೆಲ ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಮೃತರು ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *