ಮಂಗಳೂರು: ಬಂಟ್ವಾಳದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ವೇಳೆ ರಾಜಕೀಯ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಜನಾರ್ದನ ಪೂಜಾರಿ ಅವರು ಸದಾ ಜನಹಿತದ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾಯಕರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪೂಜಾರಿ ಅವರೊಂದಿಗೆ ಕೆಲಕಾಲ ಸೌಹಾರ್ದಯುತ ಮಾತುಕತೆ ನಡೆಸಿದ ಡಿ.ಕೆ. ಶಿವಕುಮಾರ್ ಅವರು ಅವರ ಆಶೀರ್ವಾದ ಪಡೆದು ಸಂತಸ ವ್ಯಕ್ತಪಡಿಸಿದರು.







