ಮಂಗಳೂರು: ಕಾರಿನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಆರೋಪಿಗಳು ಕಾರಿನಲ್ಲಿ ಮೇಲ್ಕಾರ್ – ಸಜೀಪ -ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಬಳಿ ವಾಹನವನ್ನು ತಡೆದು ನಿಲ್ಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಸುಮಾರು 80 ಕೆಜಿ ಗಾಂಜಾ ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು, 3 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.







