Breaking
20 Jun 2026, Sat

ಕಡಬದ ಕಾಯ್ಮಣ ಗ್ರಾಮದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ

ಕಡಬ: ಅರಣ್ಯ ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಉಂಟಾದ ಘಟನೆ ಕಾಯ್ಮಣ ಗ್ರಾಮದ ಮುಂಗ್ಲಿಮಜಲು ಪದವು ಎಂಬಲ್ಲಿ ಫೆ. 6 ರಂದು ನಡೆದಿದೆ.

ನೆಡುತೋಪು ಹಾಗೂ ಅರಣ್ಯ ಪ್ರದೇಶಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯಲ್ಲಿ ಸುಮಾರು ಎರಡು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು, ಅರಣ್ಯ ಇಲಾಖೆಯವರು ನಾಟಿ ಮಾಡಿರುವ ನೆಡುತೋಪಿನ ಹಣ್ಣು ಹಂಪಲುಗಳ ಗಿಡಗಳು ಸಂಪೂರ್ಣ ಸುಟ್ಟು ಹೋಗಿವೆ. ಅಲ್ಲದೇ ಅರಣ್ಯ ಪ್ರದೇಶ ಹಾಗೂ ಮುಳಿಹುಲ್ಲು ಸಹ ಬೆಂಕಿಗೆ ಆಹುತಿಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

Leave a Reply

Your email address will not be published. Required fields are marked *