ವಿಟ್ಲ: ಬೈಕ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಬಸ್ ನಿಲ್ದಾಣದ ಬಳಿ ಫೆ. 8 ರಂದು ನಡೆದಿದೆ.
ಮೃತಪಟ್ಟ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ವಿಟ್ಲದ ಕಡೆಗೆ ಅತಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಮಹಿಳೆ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.








