Breaking
21 Jun 2026, Sun

ವೈಯಕ್ತಿಕ ಕಾರಣದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಉಡುಪಿ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದ ಸರಳೆಬೆಟ್ಟು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸರಳಬೆಟ್ಟು ನಗರಸಭಾ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ಅವರ ಸಹೋದರ ಮಂಜುನಾಥ್ ಕಾಮತ್(51) ಎಂದು ಗುರುತಿಸಲಾಗಿದೆ.

ವೈಯುಕ್ತಿಕ ಕಾರಣದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ಅವಿವಾಹಿತರಾಗಿದ್ದು, ಮಣಿಪಾಲದ ಸುತ್ತಮುತ್ತ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *